ನವದೆಹಲಿ : ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಅ.2) ನವದೆಹಲಿಯ ರಾಜಘಾಟ್‌ಗೆ ತೆರಳಿ ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ರಾಜಘಾಟ್‌ನಲ್ಲಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಇದೇ ವೇಳೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಆಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ವಿಜಯ್ ಘಾಟ್‌ಗೆ ತೆರಳಿ ಶಾಸ್ತ್ರಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ ಹಾಗೂ ಸೇವೆಯ ಸಂದೇಶಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿ ತೋರಿಸಲಿ ಎಂದು ಪ್ರಧಾನಿ ಮೋದಿ ಆಶಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ದೇಶ ಸೇವೆಯ ಬದ್ಧತೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಅವರು ಸ್ಮರಿಸಿದರು.

