ಮಂಗಳೂರು: ಮದುವೆ ಸಮಾರಂಭದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಇಬ್ಬರು ಮಧ್ಯ ವಯಸ್ಕ ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಕುಂಪಲ ಕುಜುಮಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್ ನಿವಾಸಿ ಗಂಗಾಧರ್ ಎಂದು ಗುರುತಿಸಲಾಗಿದೆ. ಕೊಲ್ಯ ದೇವಸ್ಥಾನ ಸಭಾಂಗಣದಲ್ಲಿ ಭಾನುವಾರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಬಂಟ್ವಾಳ ಮೂಲದ ಅಪ್ರಾಪ್ತ ಬಾಲಕಿ ಬಂದಿದ್ದಳು. ಈ ವೇಳೆ ಆಕೆಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹೇಳಲಾಗಿದೆ. ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.