ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!

0
89

ಕೋಲಾರ : ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕರೊಬ್ಬರು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಿವಾಸಿಯಾಗಿದ್ದು, ಕೋಲಾರದ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಘಟನೆಗೆ ಸಂಬಂಧಿಸಿದಂತೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಶಿಕ್ಷಕನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here