Saturday, July 20, 2024
Homeಅಪರಾಧಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಪ್ರಕರಣ ದಾಖಲು

ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಪ್ರಕರಣ ದಾಖಲು

ಕುಂದಾಪುರ: ಕಾರಿನಲ್ಲಿ ಕರೆದೊಯ್ದು ಪಿಯುಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದಲ್ಲದೆ, ಆಕೆಯನ್ನು ಹೆದರಿಸಲು ಅಶ್ಲೀಲ ಫೋಟೊವನ್ನು ತೆಗೆದ ಕುರಿತು ಪ್ರಕರಣ ದಾಖಲಾಗಿದೆ. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ ನಿವಾಸಿ ಶ್ರೇಯಾ ನಾಯ್ಕ್ ಅತ್ಯಾಚಾರ ಪ್ರಕರಣದ ಆರೋಪಿ. ಒಂದು ವರ್ಷದ ಹಿಂದೆ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು, ಪ್ರೀತಿಯ ನಾಟಕವಾಡಿ, ಮದುವೆಯಾಗಿ ನಂಬಿಸಿದ್ದ ಎನ್ನಲಾಗಿದೆ.

ಕಾರಿನಲ್ಲಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ದೈಹಿಕ ಸಂಪರ್ಕ ಬೆಳೆಸಿದ್ದ. ಹೀಗೆ ನಿರಂತರವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ಫೋಟೊ ತೆಗೆದಿರಿಸಿಕೊಂಡು ಆಕೆಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

RELATED ARTICLES
- Advertisment -
Google search engine

Most Popular