ಮೈಸೂರು: ಕಲುಷಿತ ನೀರು ಸೇವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿ, 12 ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಗೋವಿಂದೇಗೌಡ ಮೃತಪಟ್ಟವರು. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್‌ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ಆದರೆ ನೀರು ಕುಡಿದ ಬಳಿಕ ಕೆಲವರು ವಾಂತಿ ಭೇದಿಯಿಂದ ನರಳಾಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಗೋವಿಂದೇಗೌಡರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರ ಕೊನೆಯುಸಿರೆಳೆದಿದ್ದಾರೆ. ಬೆಟ್ಟಹಳ್ಳಿ ಗ್ರಾಮಕ್ಕೆ ಆಗಮಿಸಿದ ತಾಲೂಕು ಆಸ್ಪತ್ರೆಯ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ.