ಪೊಳಲಿ: ಶಾಸಕರಿಂದ ‘ಚಂಡಿಕಾಯಾಗ’ಸೇವೆ

0
5

ಬಂಟ್ವಾಳ: ಇಲ್ಲಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ನಾಲ್ಕನೇ ದಿನ ಬುಧವಾರ ‘ಚಂಡಿಕಾಯಾಗ’ ಸೇವೆ ನಡೆಯಿತು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಉದಯ ಕುಮಾರ್ ರಾವ್, ಎ.ಗೋವಿಂದ ಪ್ರಭು, ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಶಿವಪ್ರಸಾದ್ ಕರೋಪಾಡಿ ಮತ್ತಿತರರು ಇದ್ದರು.