13 ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕನ ಪತ್ತೆಹಚ್ಚಿದ ಪೊಲೀಸರು

0
122

ಉಡುಪಿ: ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿ ವಿದ್ಯಾಬ್ಯಾಸ ಮಾಡುತ್ತಿರುವಾಗ 2012ರಲ್ಲಿ ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ಯುವಕನನ್ನು ಪೊಲೀಸರು 13 ವರ್ಷದ ಬಳಿಕ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಕುಟುಂಬದ ಜೊತೆ ಸೇರಿಸಿದ್ದಾರೆ.

ಪ್ರಭಾಕರ ಪ್ರಭು ಮಗ ಅನಂತ ಕೃಷ್ಣ ಪ್ರಭು(16) ಕಾಣೆಯಾಗಿದ್ದ ಯುವಕ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ತನಿಖೆ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಈ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಬಗ್ಗೆ ಖಚಿತಪಡಿಸಿಕೊಂಡು ಅನಂತಕೃಷ್ಣ ಪ್ರಭು(29) ಅವರನ್ನು ಪತ್ತೆ ಹಚ್ಚಿರುತ್ತಾರೆ.

ಸುಮಾರು 13 ವರ್ಷಗಳಿಂದ ಪತ್ತೆಯಾಗದೇ ಇರುವ ಹಳೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here