ಉಡುಪಿ: ಉಡುಪಿ ಪೊಲೀಸ್‌ನ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿತ್ಯಾನಂದ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.