ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಅವರು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸುನೀಲ್ ಚಿಕಿತ್ಸೆ ಫಲಕರಿಯಾಗದೆ ನಗರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂಲತಃ ಕಾಸರಗೋಡಿನವರಾದ ಸುನೀಲ್ 1996ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು. ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುನೀಲ್ ನಿಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.