ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ 7ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ಧರ್ಮಸ್ಥಳ ಪೊಲೀಸರಿಗೆ ಖಚಿತ ಮಾಹಿತಿ ಬಂದಿದ್ದು, ಇದರ ಆಧಾರದಲ್ಲಿ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಹಣವನ್ನು ಪಣಕಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ ಕುರಿತು ಮಾಹಿತಿ ಬಂದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗ ಅವರ ನೇತೃತ್ವದ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದು, ದಾಳಿ ಸಂದರ್ಭ ಏಳು ಜನರನ್ನು ಹಿಡಿದು ವಿಚಾರಣೆ ಮಾಡಲಾಗಿತ್ತು, ಅದರಲ್ಲಿ ತಮ್ಮನ್ನು ಹರಿಶ್ಚಂದ್ರ, ರಮೇಶ್ ಕುಲಾಲ್, ಸುಧಾಕರ, ಅಶೋಕ ಮಲೆಕುಡಿಯ, ಪುಷ್ಪರಾಜ್, ಶ್ರೀಧರ ಕುಂಬಾರ, ಚೆನ್ನಪ್ಪ ಗೌಡ ಎಂದು ಹೇಳಿದ್ದಾರೆ. ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿದ್ದ 5 ಕೋಳಿಗಳು, 970 ರೂ. ನಗದು ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

