ಅನೈತಿಕ ವೇಶ್ಯಾವಾಟಿಕೆ ಜಾಲಕ್ಕೆ ಪೊಲೀಸರ ದಾಳಿ : ಮಹಿಳೆಯರ ರಕ್ಷಣೆ, ಓರ್ವ ಸೆರೆ

0
18

ಹಾಸನ: ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್ ವೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು, ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಬೂವನಹಳ್ಳಿ ಸಮೀಪ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ಕರಾವಳಿ ಕಂಫರ್ಟ್‌’ ಲಾಡ್ಜ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಡಾವಣೆ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು ಎಂದು ತಿಳಿದು ಬಂದಿದೆ.

ದಾಳಿಯ ವೇಳೆ ಲಾಡ್ಜ್ ನಲ್ಲಿದ್ದ ಮೂವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಅವರನ್ನು ವಿದೇಶದಿಂದ ಕರೆತರಲಾಗಿದ್ದು, ಅಕ್ರಮ ದಂಧೆಗೆ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.

LEAVE A REPLY

Please enter your comment!
Please enter your name here