ಬೈಂದೂರು: ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ 4 ಎತ್ತುಗಳನ್ನು ಕಟ್ಟಿಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಉಸ್ಮಾನಿಯಾ ಮೊಹಲ್ಲಾದ ಮಹಮ್ಮದ್ ಸಾಜೀದ್ ಬಂತ ಆರೋಪಿ. ಈತ ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡಿ ಮಾರಾಟ ಮಾಡಲು 4 ಎತ್ತುಗಳನ್ನು ಅಕ್ರಮವಾಗಿ ತಂದು ಕಟ್ಟಿ ಹಾಕಿದ್ದ. ಪೊಲೀಸರು ದಾಳಿ ನಡೆಸಿ ಅವುಗಳನ್ನು ಸ್ವಾನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.