ಉಡುಪಿಯಲ್ಲಿ ಮಟ್ಕಾ ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ ; ವ್ಯಕ್ತಿ ವಶಕ್ಕೆ

0
9

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ-ಜುಗಾರಿ ಆಟಕ್ಕಾಗಿ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಬೆಳಗ್ಗೆ ಅಂಬಲಪಾಡಿ ಬೀಟ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು, ಪಂದುಬೆಟ್ಟು ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆ ಎಂಬ ಮಾಹಿತಿ ನಗರ ಪೊಲೀಸ್ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಅವರಿಗೆ ನೀಡಿದ್ದರು.

ತಕ್ಷಣವೇ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, “1 ರೂಪಾಯಿಗೆ 70 ರೂಪಾಯಿ” ನೀಡುವುದಾಗಿ ಕೂಗುತ್ತಾ ಸಾರ್ವಜನಿಕರಿಂದ ಹಣ ಪಡೆದು ಚೀಟಿಯಲ್ಲಿ ಸಂಖ್ಯೆಗಳು ಬರೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿದರು.

ಪೊಲೀಸರು ದಾಳಿ ನಡೆಸಿ, ಮಟ್ಕಾ-ಜುಗಾರಿ ಆಟಕ್ಕಾಗಿ ಹಣ ಸಂಗ್ರಹಿಸಿ ಚೀಟಿ ಬರೆದು ನೀಡುತ್ತಿದ್ದ ಸಾಗರದ ಕರಗಾಳ ಮೂಲದ ಶಿವಕುಮಾರ್ ಎನ್. (32) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯಿಂದ ಜುಗಾರಿ ಆಟಕ್ಕೆ ಸಂಗ್ರಹಿಸಲಾಗಿದ್ದ ₹820 ನಗದು ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here