ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಅಧ್ಯಕ್ಷರಿಂದ ಪೋಲಿಯೋ ಲಸಿಕೆಗೆ ಚಾಲನೆ

0
100

ಬಂದಾರು ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಯಶೋಧ, ಸುಣ್ಣಾನ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಸುಶೀಲ, ಹಾಗೂ ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಪುಟಾಣಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here