ಪೊಂಪೈ ಕಾಲೇಜು ಐಕಳ ಇಲ್ಲಿ ಐ.ಕ್ಯೂ. ಎ. ಸಿ, ವಾಣಿಜ್ಯ ವಿಭಾಗ ಮತ್ತು ಮಾನವಿಕ ವಿಭಾಗದ ಸಹಯೋಗದೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾದ ಯುವ ಚೈತನ್ಯವನ್ನು ನೀಡುವ “ಯಂಗ್ ಸ್ಪ್ರಿಂಗ್-24 ಎಂಬ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮೂಲಕ ಅಂತರ್ ಪದವಿ ಪೂರ್ವ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಮತ್ತು ವಾಲಿಬಾಲ್ ಸ್ಪರ್ಧೆ ನಡೆಸಲಾಯಿತು. ಪೊಂಪೈ ಕಾಲೇಜು ಐಕಳ ಇಲ್ಲಿನ ಸಮಾಜಶಾಸ್ತ್ರ ವಿಭಾಗದ ನಿವೃತ ಪ್ರಾಧ್ಯಾಪಕರಾದ ಶ್ರೀ ಯೋಗಿಂದ್ರ . ಬಿ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪದವಿ ಶಿಕ್ಷಣದ ಅಗತ್ಯತೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಪೊಂಪೈ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಮತಿ ಪ್ರೀತಿ ವೀರ ಡಿಸೋಜರವರು ಅತಿಥಿಯಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಲಿಬಾಲ್ ಪಂದ್ಯಾವಳಿಯನ್ನು ವಾಲಿಬಾಲ್ ಕಮೆಂಟೆಟರ್ ಶ್ರೀ ಶ್ರೀಶ ಶರಾಫ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಪುರುಷೋತ್ತಮ ಕೆ. ವಿ ವಹಿಸಿದರು. ಕಾರ್ಯಕ್ರಮದ ಸಂಯೋಜಕಿ ಇತಿಹಾಸ ವಿಭಾಗದ ಮುಖ್ಯಸ್ಥೆ ಶ್ತೀಮತಿ ಅಶಿತಾ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭಕ್ಕೆ ಕಾಲೇಜಿನ ಪಾಲನ ಮಂಡಳಿಯ ಸದಸ್ಯ ರು ಮತ್ತು ಕಿರೆಮ್ ಚರ್ಚ್ನ ನ ಉಪಾಧ್ಯಕ್ಷರಾದ ರೋಹನ್ ಡಿ ಕೊಸ್ಟರವರು ಮುಖ್ಯ ಆಥಿತಿಯಾಗಿ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಇನ್ನೊರ್ವ ಗೌರವಾನ್ವಿತ ಮುಖ್ಯ ಅತಿಥಿಯಾಗಿ ಶ್ರೀ ಪೆಟ್ರಿಕ್ ಮೆನೆಜಸ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಕಾಲೇಜು ಸಭಾಂಗಣದಲ್ಲಿ ಮಾನವಿಕ ವಿಭಾಗ ಮತ್ತು ವಾಣಿಜ್ಯ ವಿಭಾಗ ಆಯೋಜಿಸಿದ ಈ ಸ್ಪರ್ಧೆಯಲ್ಲಿ ನಾನಾ ಕಾಲೇಜುಗಳಿಂದ 200ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು. ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪೊಂಪೈ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ಬಜಪೆ ಇಲ್ಲಿನ ತಂಡ ಪಡೆದುಕೊಂಡಿತು. ತೃತೀಯ ಬಹುಮಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್ ತಂಡ ಪಡೆದುಕೊಂಡರು.ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಮೂಲ್ಕಿ ಇಲ್ಲಿನ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರ್ ನ ವಿದ್ಯಾರ್ಥಿಗಳ ತಂಡ ಪಡೆದುಕೊಂಡರು. ತೃತೀಯ ಬಹುಮಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಮಣ್ ತಂಡ ಪಡೆದುಕೊಂಡಿತು. ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾವಳಿಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕಟೀಲು ಪದವಿ ಪೂರ್ವ ಕಾಲೇಜಿನ ತಂಡ ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ಪದವಿ ಪೂರ್ವ ಕಾಲೇಜು ಸುಂಕದಕಟ್ಟೆಯ ಕಾಲೇಜಿನ ತಂಡ ಪಡೆದುಕೊಂಡಿತು. ತೃತೀಯ ಬಹುಮಾನವನ್ನು ಸೈಂಟ್ ಪದವಿ ಪೂರ್ವ ಕಾಲೇಜು ಬಜಪೆ ಪಡೆದುಕೊಂಡಿತು. ಪೊಂಪೈ ಪದವಿ ಪೂರ್ವ ಕಾಲೇಜು ಐಕಳ ನಾಲ್ಕನೇ ಸ್ಥಾನವನ್ನು ಪಡೆದು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿತು. ಕು.ನಿಷಾದ್ ತೃತೀಯ ಬಿ. ಕಾಂ ವಿದ್ಯಾರ್ಥಿ ಕಾರ್ಯಕ್ರಮವನು ನಿರೂಪಿಸಿದರು. ಕು.ಶ್ರೇಯಾ ಶೆಟ್ಟಿ ತೃತೀಯ ಬಿ. ಕಾಂ ವಿದ್ಯಾರ್ಥಿ ಸ್ವಾಗತಿಸಿದರು. ಕು. ಸನ್ನಿಧಿ ತೃತೀಯ ಬಿ. ಎ ವಿದ್ಯಾರ್ಥಿ ಧನ್ಯವಾದ ಸಲ್ಲಿಸಿದರು. ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಪೊಂಪೈ ಕಾಲೇಜ :ಪಿ.ಯು. ಪ್ರತಿಭಾ ಸ್ಪರ್ಧೆ
RELATED ARTICLES