ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಶರನ್ನವರಾತ್ರಿ ಮಹೋತ್ಸವವು ಅ.11ರಿಂದ 20ರತನಕ ನಡೆಯಲಿದೆ.
ಪ್ರತಿದಿನ ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ದೇವರಿಗೆ ನವರಾತ್ರಿ ಪೂಜೆ ಮತ್ತು ರಂಗಪೂಜೆ ಸಹಿತ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಅ.11ರಂದು ತೆನೆ ವಿತರಣೆ, 15ರಂದು ಬೆಳಿಗ್ಗೆ 11 ಗಂಟೆಗೆ ದುರ್ಗಾಹೋಮ, 17ರಂದು ತುಲಾ ಸಂಕ್ರಮಣ, 20ರಂದು ಆಯುಧಪೂಜೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ ತಿಳಿಸಿದ್ದಾರೆ.
