ಮೂಡಬಿದಿರೆ: ಮಡಹೆಣ್ಣು ಮಕ್ಕಳು ತಮಗೆ ಎಲ್ಲಾದರೂ ತೊಂದರೆ ಉಂಟಾದರೆ ಧ್ವನಿ ಎತ್ತಿ ಮಾತನಾಡುವ ದೈರ್ಯವನ್ನು ಹೊಂದಿರಬೇಕು. ಹಿಳೆಯರು ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಿರುವುದರ ಜೊತೆಗೆ ತಮ್ಮಲ್ಲಿನ ಕೀಳರಿಮೆ ತ್ಯಜಿಸಬೇಕು ಎಂದು ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕಿ ಡಾ. ಮೂಕಾಂಬಿಕಾ ಜಿ. ಎಸ್ ಹೇಳಿದರು
ಆಳ್ವಾಸ್ ಪದವಿ ಪೂರ್ವ ಕಾಲೇಜು ಆಂತರಿಕ ನಿರ್ವಹಣಾ ಸಮಿತಿ ವತಿಯಿಂದ ನಡೆದ `ಪೋಶ್’ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪ್ರಾಂಶುಪಾಲ ಮಹಮ್ಮದ್ ಸದಾಕತ್ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಾನ್ಸಿ ಪಿ.ಏನ್, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ವೇತಾ ಆರ್, ಹಿಂದಿ ವಿಭಾಗದ ಉಪನ್ಯಾಸಕಿ ಸಹನಾ ಉಪಸ್ಥಿತರಿದ್ದರು.
ಆಂತರಿಕ ನಿರ್ವಹಣಾ ಸಮಿತಿಯ ಸಂಯೋಜಕಿ ಡಾ. ಸುಲತಾ ಸ್ವಾಗತಿಸಿದರು. ಉಪನ್ಯಾಸಕಿ ರೋಶನಿ ವಂದಿಸಿದರು. ಉಪನ್ಯಾಸಕಿ ಆಶಾ ನಿರೂಪಿಸಿದರು.