ಮಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಅಕ್ಟೋಬರ್ 3ರಂದು ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಅ.4ರಂದು ಕರಾವಳಿಯಲ್ಲಿ ಮಳೆ
ಅಕ್ಟೋಬರ್ 4ರಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಬಾಗಲಕೋಟೆ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

