ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕ ಚುನಾವಣೆಯಲ್ಲಿ ಪುತ್ತೂರು ವಿಭಾಗ, ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಸ್ಪರ್ಧಿಸಿ ಪ್ರಚಂಡ ಮತಗಳಿಂದ ಜಯಶಾಲಿಯಾಗಿ ಜಿಲ್ಲಾ ನಿರ್ದೇಶಕರಾಗಿ ಪ್ರಭಾಕರ್ ಎಚ್ ಆರಂಬೋಡಿ ಯವರು ಆಯ್ಕೆಯಾಗಿದ್ದಾರೆ.
ಇವರು ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆರಂಬೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಪ್ರಸ್ತುತ ಸದಸ್ಯರಾಗಿದ್ದಾರೆ.