ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ವತಿಯಿಂದ ಇಂದು ದಿನಾಂಕ 12-09-2026 ರಂದು ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ “ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 76 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್, ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ, ಮಜೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ವರುಣ್ ಉಪಸ್ಥಿತರಿದ್ದರು.

