Sunday, July 21, 2024
Homeಅಪರಾಧಪ್ರಜ್ವಲ್ ರೇವಣ್ಣ ಹುಡುಕಿದವರಿಗೆ 1 ಲಕ್ಷ ರೂ. ಬಹುಮಾನದ ಪೋಸ್ಟರ್ ಅಂಟಿಸಿದವರು ಪೊಲೀಸ್ ವಶಕ್ಕೆ

ಪ್ರಜ್ವಲ್ ರೇವಣ್ಣ ಹುಡುಕಿದವರಿಗೆ 1 ಲಕ್ಷ ರೂ. ಬಹುಮಾನದ ಪೋಸ್ಟರ್ ಅಂಟಿಸಿದವರು ಪೊಲೀಸ್ ವಶಕ್ಕೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್ ಅಂಟಿಸಿದ್ದ ಜನತಾ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಜ್ವಲ್ ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ಆತನನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಜನತಾ ಪಕ್ಷದ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದರು.

ಸದ್ಯ ಪೋಸ್ಟರ್ ಅಂಟಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ.

RELATED ARTICLES
- Advertisment -
Google search engine

Most Popular