ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗುರುವಾರ ತಡರಾತ್ರಿ ಬಂಧನವಾಗಿದೆ. ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಬಂಧಿಸಿದರು.
ಚುನಾವಣೆಯ ಬಳಿಕ ವಿದೇಶಕ್ಕೆ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ 35 ದಿನಗಳ ಬಳಿಕ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12:50ಕ್ಕೆ ಬಂದಿಳಿದರು. ಈ ವೇಳೆ ನಿಲ್ದಾಣದಲ್ಲೇ ಕಾಯುತ್ತಿದ್ದ ಎಸ್ ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್ ನನ್ನು ಬಂಧಿಸಿದರು.
ಮೇ 31ರಂದು ಶುಕ್ರವಾರ ಎಸ್ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಕೆಲವು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಪ್ರಜ್ವಲ್ ತಿಳಿಸಿದ್ದರು.