Monday, May 19, 2025
Homeಬೆಂಗಳೂರುಕೈ ಮುಗಿದು ಬೇಡಿದರೂ 60ರ ಹರೆಯದ ಮನೆ ಕೆಲಸದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಜ್ವಲ್‌...

ಕೈ ಮುಗಿದು ಬೇಡಿದರೂ 60ರ ಹರೆಯದ ಮನೆ ಕೆಲಸದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಜ್ವಲ್‌ ರೇವಣ್ಣ!

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಈ ದೋಷಾರೋಪ ಪಟ್ಟಿಯ ಮಾಹಿತಿಯ ಪ್ರಕಾರ, ಕೈ ಮುಗಿದು ಬೇಡಿಕೊಂಡರೂ 60ರ ಹರೆಯದ ಮನೆ ಕೆಲಸದ ವೃದ್ಧೆಯ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿ, ಅದನ್ನು ವಿಡಿಯೋ ಕೂಡ ಮಾಡಿಕೊಂಡಿರುವ ಬಗ್ಗೆ ಬಹಿರಂಗವಾಗಿದೆ.
ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಸುಮಾರು 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ 1,652 ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಹೊಳೆನರಸಿಪುರದಲ್ಲಿ ಮನೆ ಕೆಲಸಕ್ಕೆ ಬರುತ್ತಿದ್ದ 60 ವರ್ಷದ ಸಂತ್ರಸ್ತೆಯ ಮೇಲೆ ಪ್ರಜ್ವಲ್‌ ರೇವಣ್ಣ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಬಿಟ್ಟುಬಿಡುವಂತೆ ಸಂತ್ರಸ್ತೆ ಕೈ ಮುಗಿದು ಅಂಗಲಾಚಿ ಬೇಡಿಕೊಂಡರೂ ಆರೋಪಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ವಿಡಿಯೋ ವೈರಲ್‌ ಆದ ಬಳಿಕ ಮೇ 5ರಂದು ಎಸ್‌ಐಟಿಯು ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಇದಲ್ಲದೆ ನಾಲ್ವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ ಪ್ರಜ್ವಲ್‌ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಸಿಐಡಿ ಎಸ್‌ಐಟಿ ತನಿಖೆ ನಡೆಸಿದೆ. ಎರಡು ಪ್ರಕರಣಗಳಲ್ಲಿ ದೋಷಾರೋಪ ಸಲ್ಲಿಕೆಯಾಗಿದ್ದು, ಇನ್ನೆರಡು ಪ್ರಕರಣಗಳ ತನಿಖೆ ಅಂತಿಮ ಹಂತದಲ್ಲಿದೆ.

RELATED ARTICLES
- Advertisment -
Google search engine

Most Popular