ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯ ವೇಳೆ ಕೆಲವೊಂದು ಕುತೂಹಲಕಾರಿ ವಿಚಾರಗಳು ಬಯಲಿಗೆ ಬಂದಿವೆ. ಮಾಜಿ ಸಚಿವ ಎಚ್.ಡಿ. ರೇವಣ್ಣರ ಪುತ್ರನಾಗಿರುವ ಪ್ರಜ್ವಲ್ ರೇವಣ್ಣ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ತನಿಖೆಯ ವೇಳೆ ಈ ವಿಷಯ ಗೊತ್ತಾಗಿದೆ ಎಂದು ವರದಿಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಿದ್ದ ಆರೋಪದ ಬಗ್ಗೆ ಈ ಅಂಶ ಪುಷ್ಟಿ ನೀಡಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣನ ಹಿಂದಿನ ಚಟುವಟಿಕೆಗಳನ್ನು ಕೆದಕುತ್ತಾ ಹೋದ ತನಿಖಾ ತಂಡಕ್ಕೆ ಈ ವಿಚಾರ ಪತ್ತೆಯಾಗಿದೆ.
ಪ್ರಕರಕ್ಕೆ ಸಂಬಂಧಿಸಿ ತಾಂತ್ರಿಕ ಸಾಕ್ಷ್ಯದ ಜಾಡು ಹಿಡಿದು ಹೋದಾಗ ಪ್ರಜ್ವಲ್ ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ನಡೆಸುತ್ತಿದ್ದ ಅಂಶ ಬೆಳಕಿಗೆ ಬಂದಿದೆ ಎನ್ನಲಾಗಿದೆ.