Saturday, February 15, 2025
Homeಬೆಂಗಳೂರುಅತ್ಯಾಚಾರ ಎಸಗಿರುವುದು ಸತ್ಯ, ವಿಡಿಯೋಗಳೆಲ್ಲವೂ ಅಸಲಿ: ಪ್ರಜ್ವಲ್‌ ರೇವಣ್ಣ, ಎಚ್.ಡಿ. ರೇವಣ್ಣ ವಿರುದ್ಧ ಎಸ್‌ಐಟಿ ದೋಷಾರೋಪ...

ಅತ್ಯಾಚಾರ ಎಸಗಿರುವುದು ಸತ್ಯ, ವಿಡಿಯೋಗಳೆಲ್ಲವೂ ಅಸಲಿ: ಪ್ರಜ್ವಲ್‌ ರೇವಣ್ಣ, ಎಚ್.ಡಿ. ರೇವಣ್ಣ ವಿರುದ್ಧ ಎಸ್‌ಐಟಿ ದೋಷಾರೋಪ ಸಲ್ಲಿಕೆ

ಬೆಂಗಳೂರು: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಹೊಳೆನರಸಿಪುರ ಠಾಣೆಯಲ್ಲಿ ಎಚ್.ಡಿ. ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಎರಡೂ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ಶುಕ್ರವಾರ 2144 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
2019ರಿಂದ 2022ರವರೆಗೆ ಸಂತ್ರಸ್ತೆ ಮನೆ ಕೆಲಸಕ್ಕೆ ನಿಯೋಜನೆಯಾಗಿದ್ದರು. ಈ ವೇಳೆ ಎಚ್.ಡಿ. ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಹೊಳೆ ನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಫೋನ್‌ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೆಂಗಳೂರಿನ ಬಸವನಗುಡಿ ಮನೆಯಲ್ಲಿ ಪ್ರಜ್ವಲ್‌ ರೇವಣ್ಣ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್‌ನಿಂದ ರೆಕಾರ್ಡ್‌ ಮಾಡಿಕೊಂಡಿದ್ದರು ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular