Sunday, July 14, 2024
Homeರಾಜ್ಯಅತ್ಯಾಚಾರ ಪ್ರಕರಣ | ಎಸ್ ಐಟಿ ವಿಚಾರಣೆಗೆ ಪ್ರಜ್ವಲ್ ರೇವಣ್ಣ ಅಸಹಕಾರ

ಅತ್ಯಾಚಾರ ಪ್ರಕರಣ | ಎಸ್ ಐಟಿ ವಿಚಾರಣೆಗೆ ಪ್ರಜ್ವಲ್ ರೇವಣ್ಣ ಅಸಹಕಾರ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐಟಿ ಅಧಿಕಾರಿಗಳ ಯಾವುದೇ ಪ್ರಶ್ನೆಗೆ ಸೂಕ್ತ ಉತ್ತರ ನೀಡದೆ ಅಸಹಕಾರ ತೋರಿದ್ದಾರೆ ಎಂದು ವರದಿಗಳಾಗಿವೆ.

ವಿಚಾರಣೆಯ ವೇಳೆ ಅಧಿಕಾರಿಗಳಿಗೆ ಪ್ರಜ್ವಲ್ ರೇವಣ್ಣ ಯಾವುದೇ ಸೂಕ್ತ ಉತ್ತರ ನೀಡಿಲ್ಲ ಎನ್ನಲಾಗಿದೆ. ಇದು ರಾಜಕೀಯ ಪಿತೂರಿ. ಸುಖಾಸುಮ್ಮನೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಿಮ್ಮ ಕೆಲಸ ನೀವು ಮಾಡಿ. ನಾನೇನೂ ಹೇಳಲ್ಲ ಎಂದಿದ್ದಾರೆ ಎಂದು ವರದಿಯಾಗಿದೆ.

ಎಸ್ ಐ ಟಿ ಅಧಿಕಾರಿಗಳ ಪ್ರಶ್ನೆಗೆ ನಮ್ಮ ಲಾಯರ್ ನ ಕೇಳಬೇಕು ಎಂದು ಹೇಳಿದ್ದಾರೆನ್ನಲಾಗಿದೆ. ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ. ನೀವು ಏನೇ ಪ್ರಶ್ನೆ ಕೇಳಿದರೂ ನನ್ನ ಲಾಯರ್ ಬಳಿ ಮಾತನಾಡಿ ಹೇಳುತ್ತೇನೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ ಎನ್ನಲಾಗಿದೆ. ಇಡೀ ದಿನದ ವಿಚಾರಣೆಯಲ್ಲಿ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular