Sunday, July 21, 2024
Homeರಾಜ್ಯಪ್ರಜ್ವಲ್ ರೇವಣ್ಣ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಲ್ಲ: ಅಧಿಕಾರಿಗಳ ಸ್ಪಷ್ಟನೆ

ಪ್ರಜ್ವಲ್ ರೇವಣ್ಣ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಲ್ಲ: ಅಧಿಕಾರಿಗಳ ಸ್ಪಷ್ಟನೆ

ಮಂಗಳೂರು: ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿವಾದಗಳು ಆರಂಭವಾಗುತ್ತಿದ್ದಂತೆ ವಿದೇಶಕ್ಕೆ ತೆರಳಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ ಎಂದು ಸುದ್ದಿಗಳು ಹರಿದಾಡಿದ್ದವು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿಮಾನ ನಿಲ್ದಾಣದ ಅಧಿಕಾರಿಗಳು, ಪ್ರಜ್ವಲ್ ರೇವಣ್ಣ ಭಾನುವಾರ ವಿಮಾನ ನಿಲ್ದಾಣಕ್ಕೆ ಬಂದಿಲ್ಲ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ ಎಂಬ ಸುದ್ದಿಯಾದ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ ದುಬೈನಿಂದ ಆಗಮಿಸುವ ವಿಮಾನಗಳ ಪ್ರಯಾಣಿಕರ ಪಟ್ಟಿಯಲ್ಲಿ ಪ್ರಜ್ವಲ್ ಹೆಸರಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಖಚಿತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular