ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬರುತ್ತಿರುವ ನಡುವೆ ಜರ್ಮನಿಗೆ ತೆರಳಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಈಗ ದುಬೈಗೆ ಬಂದಿದ್ದಾರೆ ಎಂದು ಸುದ್ದಿಯಾಗಿದೆ. ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಯಾಗಿದ್ದರಿಂದ, ಸಮನ್ಸ್ ಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿರುವ ಪ್ರಜ್ವಲ್ ಈಗ ಜರ್ಮನಿಯಿಂದ ದುಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೋ ಇರುವ ಬಗ್ಗೆ ಸುದ್ದಿ ಹರಡುತ್ತಿದ್ದಂತೆ, ಲೋಕಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ ತೆರಳಿದ್ದರು. ಇದೀಗ ಅಲ್ಲಿಂದ ದುಬೈಗೆ ಬಂದಿದ್ದು, ದುಬೈಯಿಂದ ರಾಜ್ಯಕ್ಕೆ ಬರಲಿದ್ದಾರೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.
ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಹೀಗಾಗಿ ಕೂಡಲೇ ಈ ಪಾಸ್ ಪೋರ್ಟ್ ರದ್ದುಪಡಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.