ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) 14 ತಿಂಗಳಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಇಂದು ತೀರ್ಪು ಪ್ರಕಟಿಸಿದ್ದು, ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ದೋಷಿ
ಕೆ.ಆರ್ ನಗರ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು, ನ್ಯಾಯಾಲದ ತೀರ್ಪು ಕೇಳಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಆಗಿದೆ.
ಆದೇಶದ ಬಳಿಕ ಕಣ್ಣೀರಿಟ್ಟ ಪ್ರಜ್ವಲ್
ದೋಷಿ ಎಂದು ತೀರ್ಪು ಹೊರಬೀಳ್ತಿದ್ದಂತೆ ಪ್ರಜ್ವಲ್ ಕಣ್ಣೀರು ಹಾಕಿದ್ದಾರೆ. ಅಳುತ್ತಾ ಕೋರ್ಟ್ನಿಂದ ಹೊರಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ದೋಷಿಯಾಗಿರೋ ಪ್ರಜ್ವಲ್ ಅವರಿಗೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.