ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಏಳು ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. 42ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಸುಮಾರು 35 ದಿನಗಳಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಿಂದ ಕಳೆದ ರಾತ್ರಿ ಬೆಂಗಳೂರಿಗೆ ಬರುವ ವೇಳೆ ವಿಮಾನ ನಿಲ್ದಾಣದಲ್ಲೇ ಎಸ್ ಐಟಿ ಬಂಧಿಸಿತ್ತು. ಅಲ್ಲಿಂದ ಅವರನ್ನು ಎಸ್ ಐಟಿ ಕಚೇರಿಗೆ ಕರೆ ತರಲಾಗಿತ್ತು.
ಎಸ್ ಐಟಿ ಕಚೇರಿಯಲ್ಲಿ ರಾತ್ರಿ ಕಳೆದಿದ್ದ ಪ್ರಜ್ವಲ್ ರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ಎಲ್ಲಾ ಪರಿಶೀಲನೆ ನಡೆದ ಬಳಿಕ ಪೊಲೀಸರು ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಎಸ್ ಐಟಿ ಪ್ರಜ್ವಲ್ ರೇವಣ್ಣ ಅವರನ್ನು 15 ದಿನ ಕಸ್ಟಡಿಗೆ ಕೇಳಿತ್ತು.