ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಿಸ್ತು ಕ್ರಮ ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅವರನ್ನು ಅಮಾನತುಗೊಳಿಸಿದೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದ್ದಾರೆ.