ಕಾಸರಗೋಡು ಕನ್ನಡ ಭವನದ ರಾಷ್ಟ್ರೀಯ ಪ್ರಶಸ್ತಿಗೆ ಪ್ರಕಾಶ್ ಮತ್ತಿಹಳ್ಳಿ ಆಯ್ಕೆ

0
9

ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಅವರನ್ನು ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ **‘ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’**ಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಭವನ ಮತ್ತು ಗ್ರಂಥಾಲಯದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26, 2026ರಂದು ನಡೆಯಲಿರುವ **‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ–2026’**ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುವುದು.

ಕರ್ನಾಟಕ ಗಡಿ ಪ್ರದೇಶಗಳ ಅಭಿವೃದ್ಧಿ ಹಾಗೂ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಗಡಿನಾಡಿನ ಕನ್ನಡಿಗರ ಹಿತಾಸಕ್ತಿಗಾಗಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 26ರಂದು ನಡೆಯಲಿರುವ ಈ ಸಮ್ಮೇಳನದಲ್ಲಿ ರಾಜ್ಯ ಹಾಗೂ ಗಡಿನಾಡಿನ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಸೇವಾ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕ ಗಣ್ಯರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನಿಸಿ ಸನ್ಮಾನಿಸಲಾಗುವುದು.

LEAVE A REPLY

Please enter your comment!
Please enter your name here