ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸುವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರತಿಭಾ ಪುರಸ್ಕಾರ ನೆರವೇರಿಸುವರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್. ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.