Wednesday, July 24, 2024
Homeನಿಧನಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ ನಿಧನ

ಮೂಡುಬಿದಿರೆ: ಇಲ್ಲಿನ ಹಿರೇ ಅಮ್ಮನವರ ಬಸದಿಯ ಪ್ರತಿಷ್ಠಾ ಪುರೋಹಿತ ಎಂ. ಧರ್ಮರಾಜ ಇಂದ್ರ (94) ಪೇಪರ್ ಮಿಲ್ ಬಳಿ ತಮ್ಮ ನಿವಾಸದಲ್ಲಿ ಬುಧವಾರ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ಧಾರೆ. ರಾಷ್ಟ್ರಭಾಷಾ ವಿಶಾರದರಾಗಿದ್ದ ಅವರು ಐದು ದಶಕಗಳಿಂದ ಬಸದಿಯ ಪುರೋಹಿತರಾಗಿ, ಬಸದಿಯಲ್ಲಿ ನಿಂತು ಹೋಗಿದ್ದ ರಥೋತ್ಸವವನ್ನು ಮತ್ತೆ ಆರಂಭಿಸಿದ್ದರು. ಬೃಹತ್ ವಿವಿಧ ಜೈನ ಆರಾಧನಾ ಕೋಶ’ದ ಸಂಪಾದನಾ ಕೃತಿ ಸಹಿತ ಹತ್ತಕ್ಕೂ ಅಧಿಕ ಜೈನ ಆರಾಧನಾ ಸಾಹಿತ್ಯ ಕೃತಿಗಳನ್ನು ಅವರು ರಚಿಸಿ, ಸಂಪಾದಿಸಿದ್ದಾರೆ. ಈ ಪೈಕಿ ಅವರು ಬರೆದ ಪದ್ಮಾವತಿ ದೇವಿ ಚರಿತ್ರೆ ಕನ್ನಡ, ಹಿಂದಿ, ಇಂಗ್ಲೀಷ್ ಸಹಿತ ಏಳು ಭಾಷೆಗಳಲ್ಲಿ ಪ್ರಕಟವಾಗಿರುವುದು ಗಮನಾರ್ಹವಾಗಿದೆ. ಜಿನಭಕ್ತಿಗೀತೆಗಳ ರಚನೆ, ಹಾಡುಗಾರರಾಗಿ, ಹಾರ್ಮೋನಿಯಂ ವಾದಕರಾಗಿದ್ದರು. ಮೂಡುಬಿದಿರೆಯ ಸಾಂಗತ್ಯದಿಂದ ಆರಾಧನಾ ಸಾಹಿತ್ಯ ಋಷಿ ಬಿರುದು, ತೌಳವ ಇಂದ್ರ ಸಮಾಜ, ಎಂ.ಸಿ.ಎಸ್.ಬ್ಯಾಂಕಿನ ಸಹಕಾರಿ ಸಪ್ತಾಹ ಗೌರವ, ಮೂಡುಬಿದಿರೆ ಪ್ರೆಸ್ ಕ್ಲಬ್ ಗೌರವ -(2023) ಸಹಿತ ಹಲವು ಗೌರವಾದರಗಳಿಗೆ ಅವರು ಭಾಜನರಾಗಿದ್ದರು.

RELATED ARTICLES
- Advertisment -
Google search engine

Most Popular