ಸಜೀಪ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮವು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಶ್ರೀನಿವಾಸ ಶಿವ, ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು, ಲಿಂಗಪ್ಪ ದೋಟ, ಪ್ರಬಂಧಕ ಪ್ರಶಾಂತ್ ಕುಮಾರ್, ಹೇಮಂತ್ ಸೇರಿದಂತೆ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

