ಪಡುಬಿದ್ರಿ : ಗರ್ಭಿಣಿಯರು ತಮ್ಮ ಆರೋಗ್ಯದ ಜೊತೆಗೆ ಗರ್ಭದಲ್ಲಿರುವ ಮಗುವಿನ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು. ಪೌಷ್ಟಿಕ ಆಹಾರ ಸೇವನೆ, ನಿಯಮಿತ ಆರೋಗ್ಯ ತಪಾಸಣೆ ಹಾಗೂ ವೈದ್ಯರ ಸಲಹೆ ಪಾಲಿಸುವುದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಅತ್ಯಗತ್ಯ ಎಂದು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ ಹೇಳಿದರು.
ಅವರು ಶನಿವಾರ ಪಡುಬಿದ್ರಿ ಸಹಕಾರಿ ಸಂಗಮದಲ್ಲಿ ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಹಾಗೂ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ತಾಯಿ ಮತ್ತು ಮಗುವಿನ ಆರೋಗ್ಯ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಪಡುಬಿದ್ರಿಯ ಅಧ್ಯಕ್ಷ ವ್ಯೆ. ಸುಧೀರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೋಟರಿ ವಲಯ ಸಹಾಯಕ ಗವರ್ನರ್ ಸುರೇಶ್ ನಾಯಕ್ ಕಾರ್ಕಳ, ಕೆನರಾ ಬ್ಯಾಂಕ್ನ ಬ್ರಹ್ಮಗಿರಿ ಶಾಖೆಯ ಪ್ರಬಂಧಕಿ ಸೌಮ್ಯ ಸುವರ್ಣ, ಪೂರ್ಣಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಯಶೋಧ ಪಡುಬಿದ್ರಿ ಹಾಗೂ ಇನ್ನರ್ ವೀಲ್ ಕ್ಲಬ್ ಪಡುಬಿದ್ರಿಯ ಅಧ್ಯಕ್ಷೆ ಶುಭಾ ದಿನೇಶ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿವೃತ್ತ ಪ್ರಬಂಧಕ ಪ್ರಬೋಧ್ ಚಂದ್ರ ಹೆಜ್ಮಾಡಿ , Meternal & child Health ಜಿಲ್ಲಾ ವ್ಯೆಸ್ ಚಯರ್ ಮೆನ್ ಸಂತೋಷ್ ಪಡುಬಿದ್ರಿ ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಹಾಗೂ ಆಸುಪಾಸಿನ ಪ್ರದೇಶಗಳ 27 ಮಂದಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ಗಳನ್ನು ವಿತರಿಸಲಾಯಿತು. ಸಮಾಜಮುಖಿ ಸೇವೆಯನ್ನು ಗುರುತಿಸಿ ನಿವೃತ್ತ ಅಂಗನವಾಡಿ ಶಿಕ್ಷಕಿ ಶ್ರೀವಾಣಿ ಜಯರಾಮ್ ಹಾಗೂ ನಿವೃತ್ತ ಎಸ್ಸಿಡಿಸಿಸಿ ಬ್ಯಾಂಕ್ ಪ್ರಬಂಧಕರು ಮತ್ತು ಸಮಾಜಸೇವಕರಾದ ಶ್ರೀ ಪ್ರಬೋಧ್ ಚಂದ್ರ ಹೆಜಮಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್. ಉಪಸ್ಥಿತರಿದ್ದರು. ವ್ಯೆ. ಸುಧೀರ್ ಕುಮಾರ್ ಸ್ವಾಗತಿಸಿದರು. ಆರತಿ ಹರಿಪ್ರಸಾದ್ ವಂದಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು.
ತಾಯಿ ಮತ್ತು ಮಗುವಿನ ಆರೋಗ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವು ಸಮಾಜಮುಖಿ ಕಾಳಜಿ ಮತ್ತು ಸೇವಾ ಮನೋಭಾವಕ್ಕೆ ಸಾಕ್ಷಿಯಾಯಿತು.

