ಶ್ರೀಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿಗುಡಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಸಮಿತಿಗಳ ಸಂಚಾಲಕರು, ಸಹಸಂಚಾಲಕರ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನದಾಸ ಅಡ್ಯಂತಾಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ಪಿ ಸುಚರಿತ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನಕಾರ್ಯದರ್ಶಿ ಪ್ರಶಾಂತ್ ಕುಮಾರ್, ವ್ಯವಸ್ಥಾಪನ ಸಮಿತಿ ಉಪಾಧ್ಯಕ್ಷರಾದ ಜಯ ಸಿ.ಅಂಚನ್, ಕಾರ್ಯದರ್ಶಿ ಸಂಜೀವ ಕೋಟ್ಯಾನ್, ಕೋಶಾಧಿಕಾರಿ ರಂಜಿತ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಕರುಣಾಕರ ಶೆಟ್ಟಿ ಬಾರಾಡಿ, ವ್ಯವಾಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.