ಉಡುಪಿ: ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿ ನಾರಾಯಣ ಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯುವಜನತೆಗೆ ಪರಮ ಪೂಜ್ಯ ಗುರುಗಳ ಸಂದೇಶವನ್ನು ಪಸರಿಸುವ ಕಾರ್ಯಕ್ಕೆ ಕಾರ್ಯಕ್ರಮ ಪ್ರೇರಣೆಯಾಗುವ ರೀತಿಯಲ್ಲಿ ಆಚರಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ., ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿ. ಎನ್. ಶಂಕರ ಪೂಜಾರಿ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ, ಉಡುಪಿ ಜಿಲ್ಲೆಯ BSNDP ಅಧ್ಯಕ್ಷರಾದ ಶ್ರೀಧರ್ ಅಮೀನ್, ವಿವಿಧ ಗುರು ಮಂದಿರಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.