ಬೋಳ : ಮೇಲಂಗಡಿ ಗೆಳೆಯರ ಬಳಗ ಹಾಗೂ ಹಿಂದೂ ಜಾಗರಣ ವೇದಿಕೆ ಇವರ ಆಶ್ರಯದಲ್ಲಿ ನಡೆಯಲಿರುವ 25ನೇ ವರ್ಷದ ರಜತ ಸಂಭ್ರಮದ ‘ಬೋಳದ ಅಷ್ಟಮಿ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನ, ಬೋಳದಲ್ಲಿ ಪ್ರಮುಖರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ದಿನಾಂಕ ಸೆ.05 ಮತ್ತು 06ರಂದು ನಡೆಯಲಿದೆ. ಈ ವರ್ಷದ ‘ಬೋಳದ ಅಷ್ಟಮಿ’ ಕಾರ್ಯಕ್ರಮವು ರಜತ ಸಂಭ್ರಮದ ವಿಶೇಷತೆಯನ್ನು ಹೊಂದಿದ್ದು, ಭಕ್ತರು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ಆಯೋಜಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮೇಲಂಗಡಿ ಗೆಳೆಯರ ಬಳಗದ ಪದಾಧಿಕಾರಿಗಳು, ಹಿಂದೂ ಜಾಗರಣ ವೇದಿಕೆಯ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

