ಬನ್ನಡ್ಕದಲ್ಲಿ 5ನೇ ವರ್ಷದ ಸಾರ್ವಜನಿಕ ಶಾರದಾ ಉತ್ಸವದ ಪೂರ್ವಭಾವಿ ಸಭೆ

0
9

ಮೂಡುಬಿದಿರೆ : ಶ್ರೀ ಕ್ಷೇತ್ರ ಬನ್ನಡ್ಕದ ವತಿಯಿಂದ ಅಕ್ಟೋಬರ್ 20 ಮತ್ತು 21ರಂದು ನಡೆಯಲಿರುವ 5ನೇ ವರ್ಷದ ಸಾರ್ವಜನಿಕ ಶಾರದಾ ಉತ್ಸವದ ಪೂರ್ವಭಾವಿ ಸಭೆಯು ಎಂ.ದಯಾನಂದ ಪೈ ಅಧ್ಯಕ್ಷತೆಯಲ್ಲಿ ಆಗಸ್ಟ್ 30ರಂದು ಬನ್ನಡ್ಕ ಹಾಲಿನ ಡೈರಿಯ ಮೈದಾನದಲ್ಲಿ ನಡೆಯಿತು.

ಸಭೆಯಲ್ಲಿ ಸಾರ್ವಜನಿಕ ಶಾರದಾ ಉತ್ಸವವವು ಎಂ.ದಯಾನಂದ ಪೈ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಹಾಗೂ ವಿಜೃಂಭಣೆಯಿಂದ ನಡೆಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಉತ್ಸವದ ವಿವಿಧ ಕಾರ್ಯಕ್ರಮಗಳ ರೂಪುರೇಷೆ, ಸೇವಾ ಕಾರ್ಯಗಳು, ವ್ಯವಸ್ಥೆಗಳ ಸಿದ್ಧತೆ ಹಾಗೂ ಸದಸ್ಯರ ಸಹಕಾರದ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಉತ್ಸವ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ಸಮಿತಿ ಸದಸ್ಯರು ಸೇರಿದಂತೆ ಸಾರ್ವಜನಿಕ ಶಾರದಾ ಉತ್ಸವದ ಸರ್ವ ಸದಸ್ಯರು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಉತ್ಸವದ ಯಶಸ್ಸಿಗೆ ಅಗತ್ಯವಿರುವ ವಿವಿಧ ವಿಚಾರಗಳ ಕುರಿತು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಇದುವರೆಗೆ ಸಾರ್ವಜನಿಕ ಶಾರದಾ ದೇವಿಯ ಉತ್ಸವದ ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವವರು ಹಾಗೂ ಮುಂದೆಯೂ ಶ್ರೀ ದೇವಿಯ ಸೇವೆಯಲ್ಲಿ ಭಾಗವಹಿಸಲು ಇಚ್ಛಿಸುವ ಸರ್ವ ಸದಸ್ಯರು ಉತ್ಸವದ ಯಶಸ್ಸಿಗೆ ಕೈಜೋಡಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.

ಸಭೆಗೆ ಆಗಮಿಸಿ ತಮ್ಮ ಅಮೂಲ್ಯ ಸಮಯವನ್ನು ನೀಡಿ ಸಲಹೆ–ಸೂಚನೆ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಆಗಮಿಸಲು ಸಾಧ್ಯವಾಗದ ಬನ್ನಡ್ಕ ಶಾರದಾ ಉತ್ಸವ ಸಮಿತಿಯ ಸರ್ವ ಸದಸ್ಯರಿಗೂ ಸಮಿತಿಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

5ನೇ ವರ್ಷದ ಸಾರ್ವಜನಿಕ ಶಾರದಾ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಪ್ರತಿಯೊಬ್ಬರ ಸಹಕಾರ, ಸಲಹೆ ಹಾಗೂ ಉಪಸ್ಥಿತಿ ಅತ್ಯಂತ ಅಗತ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಶ್ರೀ ಶಾರದಾ ದೇವಿಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಸಮಿತಿ ಮನವಿ ಮಾಡಿದೆ.

ಶ್ರೀ ಶಾರದಾ ದೇವಿಯ ಕೃಪಾಶೀರ್ವಾದ ಸದಾ ಸರ್ವರ ಮೇಲಿರಲಿ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರೈಸಿದರು.