ಮಂಗಳೂರಿನ ಅತ್ತಾವರದ ಖಾಸಗಿ ಹೋಟೆಲ್‌ನಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆಯ ಜರಗಿತ್ತು.
ಕರಾವಳಿ ಜಿಲ್ಲೆಗಳಲ್ಲಿ ಹೇರಳವಾಗಿ ಲಭ್ಯವಿರುವ ಪ್ರಾಕೃತಿಕ ಸೌಂದರ್ಯ, ಬೀಚ್ ಟೂರಿಸಂ, ಟೆಂಪಲ್ ಟೂರಿಸಂ ಹಾಗೂ ಇನ್ನಿತರ ಪ್ರವಾಸೋದ್ಯಮ ಕೇಂದ್ರಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್, ಕರಾವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕ ಮಿತ್ರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ವಿನೋದ್ ಶೆಟ್ಟಿ ಉಡುಪಿ

