ಪ್ರೆಸ್ ಕ್ಲಬ್ ನಿರ್ಮಾಣ : ಶಾಸಕರ ವೀಕ್ಷಣಾ ಭೇಟಿ

0
41

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದ್ರಿ ಪ್ರೆಸ್ ಕ್ಲಬ್ ನಿಂದ ಪ್ರವಾಸಿ ಮಂದಿರದ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಟ್ಟಡದ ಅಭಿವೃದ್ಧಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ಅವರು ನೀಡಿದರು.ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು, ಕೋಶಾಧಿಕಾರಿ ಪ್ರಸನ್ನ ಹೆಗ್ಡೆ, ಗುತ್ತಿಗೆದಾರ ಕೃಷ್ಣರಾಜ್, ಇಂಜಿನಿಯರ್ ಇಕ್ಬಾಲ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಶರತ್ ದೇವಾಡಿಗ, ಸದಸ್ಯ ಯಶೋಧರ ಬಂಗೇರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here