ಕಾರ್ಕಳ ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ ಹಾಗೂ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವು ಸಾಲ್ಮರದ ಗುರುದೀಪ್ ಗಾರ್ಡನ್ಸ್ ನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆ ಮಾತನಾಡಿ, ಸಮಾಜದಲ್ಲಿ ಆಗುವ ಅಂಕು-ಡೊಂಕುಗಳನ್ನು ತಿದ್ದುವ ಕೆಲಸವನ್ನು ಹಾಗೂ ಸರಕಾರದ ಲೋಪದೋಷಗಳನ್ನು ಸರಿಪಡಿಸುವಲ್ಲಿ ಪತ್ರಿಕಾ ರಂಗ ಬಹಳ ಪ್ರಾಮುಖ್ಯವಾಗಿದೆ. ಪತ್ರಿಕೆಗಳು ಸಮಾಜದ ಕನ್ನಡಿಯಂತಿರಬೇಕು, ಸಮಾಜದಲ್ಲಿ ಕುಂದುಕೊರತೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ.
ಪತ್ರಕರ್ತನಾದವನು ಪಕ್ಷಾತೀತನಾಗಿರಬೇಕು ಸತ್ಯವಾದಿಯಾಗಿರಬೇಕು ಇದರ ಜತೆಗೆ ಆತನ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಮಾಜದ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವು ಸರ್ಕಾರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಸರ್ಕಾರದ ಲೋಪದೋಷಗಳನ್ನು ಎತ್ತಿ ತೋರಿಸುವ ಮೂಲಕ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರ್ಕಳ ಪತ್ರಕರ್ತರ ಅಧ್ಯಕ್ಷ ಮೊಹಮ್ಮದ್ ಶರೀಫ್, ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಸಂಪಾದಕ ವಸಂತ ಕುಮಾರ್ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತರಾದ ಕುಂಟಾಡಿ ದಯಾನಂದ ಪೈ ಹಾಗೂ ಕಾರ್ಕಳದ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿತ್ಯಾನಂದ ಪೈ, ರಾಮಚಂದ್ರ ನಾಯಕ್, ಪುರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಅವಿನಾಶ ಶೆಟ್ಟಿ, ಪ್ರದೀಪ್ ಆಚಾರ್ಯ, ಹರೀಶ್ ಅಮೀನ್, ಮುಂತಾದವರು ಉಪಸ್ಥಿತರಿದ್ದರು. ಹರೀಶ್ ಆಚಾರ್ಯ ಸ್ವಾಗತಿಸಿ, ಪ್ರಕಾಶ್ ರಾವ್ ವಂದಿಸಿದರು.