ಮುಲ್ಕಿ:ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಭಾನುವಾರ ಮುಲ್ಕಿ ಹೊಟೇಲ್ ಸ್ವಾಗತ್ ಸಭಾಂಗಣದಲ್ಲಿ ನಡೆಯಿತು. ವಿಶೇಷ ಆಹ್ವಾನಿತರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಕಾರ್ಯದ ಮೂಲಕ ಸಮಾಜದ ಆಸ್ತಿಯಾಗಿದ್ದಾರೆ ಎಂದರು.
ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯದರ್ಶಿ ಪ್ರಕಾಶ್ ಸುವರ್ಣ,ಕೋಶಾಧಿಕಾರಿ ರಘುನಾಥ ಕಾಮತ್ ಕೆಂಚನಕೆರೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಪತ್ರಕರ್ತರಾದ ಶರತ್ ಶೆಟ್ಟಿ, ಕಿನ್ನಿಗೋಳಿ ಮತ್ತು ಮಿಥುನ ಕೊಡೆತ್ತೂರು ರನ್ನು ಸಂಮಾನಿಸಲಾಯಿತು ಹಾಗೂ ದೇವಾಂಶು ಕೋಟ್ಯಾನ್ ಮನೀಷ್ ಎಸ್. ಶೆಟ್ಟಿ ಮತ್ತು ಮಾಧವ ಕಾಮತ್ ಕೆಂಚನಕರೆಯವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪತ್ರಕರ್ತ ಶರತ್ ಶೆಟ್ಟಿ ಸ್ವಾಗತಿಸಿದರು. ಹರೀಶ್ ಹೆಜ್ಮಾಡಿ ನಿರೂಪಿಸಿದರು.