ಹಿಂಸಾತ್ಮಕವಾಗಿ ಅಕ್ರಮ ಗೋಸಾಗಾಟ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಗೋಕಳ್ಳರು ಪರಾರಿ
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಯ್ಯಾಡಿಯಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ಜಾನುವಾರು ಸಾಗಾಟ ಮಾಡುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಗೋಕಳ್ಳರು ಪರಾರಿಯಾಗಿರುತ್ತಾರೆ ಮತ್ತು ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋಸಾಗಾಟವನ್ನು ತಡೆಗಟ್ಟಲು ಮತ್ತು ತಪ್ಪಿತಸ್ಥರ ಹಾಗೂ ದಲ್ಲಾಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಗ್ರಹಿಸಲಾಯಿತು.
ಗೋಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಿರ್ಲಕ್ಷಿಸಿದರೆ ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ಸoಯೋಜಕ ಹರೀಶ್ ಸಲ್ಕೋಡ್ ಎಚ್ಚರಿಸಿದರು.
ಈ ಸಂಧರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ತಾಲೂಕು ಸoಯೋಜಕರಾದ ಹರೀಶ್ ಸಲ್ಕೋಡ್, ಜಿಲ್ಲಾ ಸಮಿತಿ ಸದಸ್ಯರಾದ ರಾಜೇಶ್ ಆಚಾರ್ಯ ಬೈಂದೂರು, ಬಾಬು ಮಯ್ಯಾಡಿ ಮತ್ತು ಇತರರು ಉಪಸ್ಥಿತರಿದ್ದರು.

