ಪ್ರಾಥಮಿಕ ಅರೋಗ್ಯ ಕೇಂದ್ರ ಕಾಪು : 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0
16

ಕಾಪು : ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರ ಕಾಪುವಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಆಡಳಿತ ವೈದ್ಯಾಧಿಕಾರಿ ಡಾ | ಬಿಂದು ಭಟ್ ಹಾಗೂ ಹಿರಿಯ ಮಹಿಳಾ ಅರೋಗ್ಯ ಸಹಾಯಕಿ ನಿರ್ಮಲ ಧ್ವಜಾರೋಹಣಗೈದರು, ಕ್ಷೇತ್ರ ಶಿಕ್ಷಣ ಅಧಿಕಾರಿ ಚಂದ್ರಕಲಾ ಸ್ವಾತಂತ್ರ್ಯ ದಿನದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಅರೋಗ್ಯ ಕೇಂದ್ರದ ಪ್ರಮುಖರು, ಸಿಬ್ಬಂದಿ ವರ್ಗ,ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತಿ ಹೊಂದಿದ 4 ಜನ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.