Monday, January 20, 2025
Homeರಾಷ್ಟ್ರೀಯವಾಜಪೇಯಿ ಜನ್ಮದಿಂದೇ ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಶಿಲನ್ಯಾಸ

ವಾಜಪೇಯಿ ಜನ್ಮದಿಂದೇ ದೇಶದ ಮೊದಲ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಶಿಲನ್ಯಾಸ

ಭೋಪಾಲ್: ದೇಶದಲ್ಲಿ ಮೊದಲ ಬಾರಿಗೆ ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದಂದೇ ಅವರ ಬಹದೊಡ್ಡ ಕನಸು ಈಡೇರಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಮಧ್ಯಪ್ರದೇಶದ ಖಜ್ರಾಹೋದಲ್ಲಿ ಕೆನ್-ಬೆಟ್ವಾ ನದಿಗಳ ಜೋಡಣೆಗೆ ಪ್ರಧಾನಿ ನರೇಂದ್ರ ಮೋದಿ ಶಿಲನ್ಯಾಸ ಮಾಡಿದ್ದಾರೆ.
ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ, ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಸಚಿವ ಪ್ರಹ್ಲಾದ್ ಪಟೇಲ್, ಉಪಮುಖ್ಯಮಂತ್ರಿ ಜಗದೀಶ್ ದೇವ್ರಾ, ಸಚಿವ ರಾಕೇಶ್ ಸಿಂಗ್, ಜಲಸಂಪನ್ಮೂಲ ಸಚಿವೆ ತುಳಸಿ ಸಿಲಾವತ್, ಕೃಷಿ ಸಚಿವ ಇಂದಲ್ ಸಿಂಗ್ ಕಂಸಾನಾ, ಕೇಂದ್ರ ಕೇಂದ್ರ ಕೃಷಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ವಾಜಪೇಯಿ ಅವರ ಕನಸು ನದಿಗಳ ಜೋಡಣೆ ಯೋಜನೆಯನ್ನೂ ಜಾರಿಗೆ ತರಲು ಬಯಸಿದ್ದರು. ಅದು ಸಾಧ್ಯವಾಗಿರಲಿಲ್ಲ. ಬಳಿಕ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಒಟ್ಟಾಗಿ ಈ ಕಾರ್ಯದಲ್ಲಿ ಎದುರಾದ ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದು, ಈಗ ಕೇಂದ್ರದಿಂದ ಅನುದಾನ ಮಂಜೂರಾತಿಯೂ ಸಿಕ್ಕಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅದರ ಶಿಲನ್ಯಾಸ ನೆರವೇರಿಸಿದ್ದಾರೆ.

RELATED ARTICLES
- Advertisment -
Google search engine

Most Popular