ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ಶುಭಾಶಯ..!

0
17

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂಧ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಇದಲ್ಲದೆ, “ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ” ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಧಾನಿಯ ಈ ಶುಭಾಶಯ ಸಂದೇಶವು ರಾಜ್ಯದ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಉತ್ತಮ ಸಮನ್ವಯಕ್ಕೆ ಇದು ಪೂರಕವಾಗಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

LEAVE A REPLY

Please enter your comment!
Please enter your name here