ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

0
40

ಘಾನಾ: ಆಫ್ರಿಕನ್ ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿ ನೀಡಲಾಗಿದೆ. ಅಕ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದ ಅಧ್ಯಕ್ಷ ಮಹಾಮ ಅವರು ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದರು. ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ, ಘಾನಾದ ಅತ್ಯುನ್ನತ ಗೌರವವನ್ನು ಪಡೆದಿರುವುದು ನನಗೆ ಹೆಮ್ಮೆ ಮತ್ತು ಗೌರವದ ವಿಷಯ ಎಂದು ಹೇಳಿದರು.

ಜುಲೈ 9 ರವರೆಗೆ ಪ್ರಧಾನಿ ಮೋದಿ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಜುಲೈ 6 ಮತ್ತು 7 ರಂದು ಬ್ರೆಜಿಲ್‌ನಲ್ಲಿ ನಡೆಯಲಿರುವ 17 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದು ಜಾಗತಿಕ ದಕ್ಷಿಣದ ದೇಶಗಳೊಂದಿಗೆ ಭಾರತದ ಸಂಬಂಧಗಳಿಗೆ ಹೊಸ ಆಯಾಮವನ್ನು ನೀಡುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here