ಬೆಂಗಳೂರು: ‘ದೇಶದ ಪ್ರಧಾನಿಗಳ ಪೈಕಿ, ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ’ ಎಂದು ಹೇಳಿದರು.
‘ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್-ಪೆಟ್ರೋಲ್-ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದರು ಹಾಕಿದ್ರಾ’ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಶ್ವಾಸನೆಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿ ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಆಶ್ವಾಸನೆಗಳನ್ನು ಪಟ್ಟಿ ಮಾಡಿ ಪ್ರಶ್ನಿಸಿದ ಮುಖ್ಯಮಂತ್ರಿ
RELATED ARTICLES